ದೀಪಾವಳಿ ಹಬ್ಬ ಬೆಳಕಿನ ಹಬ್ಬ.ಈ ಬೆಳಕಿನ ಹಬ್ಬ ದೀಪಾವಳಿಯನ್ನು ಆದಷ್ಟು ಪಟಾಕಿ ರಹಿತ,ಪರಿಸರ ಸ್ನೇಹಿ ಹಬ್ಬವನ್ನಾಗಿ ಆಚರಿಸಿ.ಸಕಲ ಮಾಧ್ವರಿಗೆ ದೀಪಾವಳಿ ಹಬ್ಬದ ಶುಭಾಶಯಗಳು.
- ದ್ವೈತ ದರ್ಶನ
ದ್ವೈತ ವೇದಾಂತವು ಜಗದ್ಗುರು ಶ್ರೀಮನ್ ಮಧ್ವಾಚಾರ್ಯರು ಪ್ರತಿಪಾದಿಸಿದ ತತ್ವ . 12 ನೆ ಶತಮಾನದಲ್ಲಿ ಮಧ್ಯಗೇಹ ಭಟ್ಟ ಹಾಗು ವೇದವತಿ ದಂಪತಿಗಳಿಗೆ ವಾಸುದೇವ ಎಂಬ ಹೆಸರಿನಿಂದ ಜನಿಸಿದ ಸಾಕ್ಷಾತ್ ವಾಯುದೆವರು , ಮುಂದೆ ಅಚ್ಯುತಪ್ರೇಕ್ಷ ( ಪ್ರಜ್ಞ ) ರಿಂದ ಸನ್ಯಾಸ ಸ್ವೀಕಾರ ಮಾಡಿ ಪೂರ್ಣಪ್ರಜ್ಞರಾಗಿ ಮುಂದೆ ವಾದಿವಿಜಯರಾಗಿ ಎಲ್ಲರಿಗು ಸದ್ವೈಷ್ಣವ ಸಿದ್ಧಾಂತವನ್ನು ಬೋಧಿಸಿ , ದ್ವೈತವನ್ನು ಪುನರುತ್ಥಾನಗೊಳಿಸಿ , ಎಲ್ಲರಿಗೂ ಆನಂದವನ್ನು ಉಂಟು ಮಾಡಿ ಆನಂದತೀರ್ಥರೆನಿಸಿ , ಮುಂದೆ ಅನೇಕ ಗ್ರಂಥರತ್ನಗಳನ್ನೂ ವಿರಚಿಸಿ, ಪರಿಶುದ್ಧ ತತ್ತ್ವವನ್ನು ಕರುಣಿಸಿ ಮಧ್ವಾಚಾರ್ಯರಾಗಿ ಲೋಕವನ್ನೇ ಸಲಹುತ್ತಿದ್ದಾರೆ.
ಶ್ರೀರಾಘವೇಂದ್ರಸ್ವಾಮಿಗಳವರ ಮಂಗಲಕರ ಚರಿತ್ರೆಯನ್ನು ತಿಳಿಸುವ ಮಹತ್ಕೃತಿಯಾದ ಶ್ರೀರಾಘವೇಂದ್ರವಿಜಯವು ಸ್ವತಃ ಶ್ರೀರಾಘವೇಂದ್ರಸ್ವಾಮಿಗಳವರೇ ಅವಲೋಕಿಸಿ ಅನುಮೋದಿಸಿದ ಮಹತ್ಕ...
No comments:
Post a Comment