Friday, 23 December 2011

ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಿಂದ ಶ್ರೀ ಪದ್ಮನಾಭ ತೀರ್ಥರ ಆರಾಧನಾ ಮಹೋತ್ಸವ [ ನವ ವೃಂದಾವನ ] ೨೦೧೧

ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಿಂದ  ಶ್ರೀ ಪದ್ಮನಾಭ ತೀರ್ಥರ ಆರಾಧನಾ ಮಹೋತ್ಸವ [ ನವ ವೃಂದಾವನ ] ದಲ್ಲಿ ಆಚರಿಸಲಾಯಿತು.ಪ್ರತಿವರ್ಷದಂತೆ ಈ ವರ್ಷವೂ ಕೂಡ ಪ್ರಸ್ತುತ ಪೀಠಾಧಿಪತಿ ಶ್ರೀ ೧೦೦೮ ಶ್ರೀ ಸುಯತೀಂದ್ರ ತೀರ್ಥ ಶ್ರೀಪಾದಂಗಳವರು ವೃಂದಾವನ ಸ್ಥಳದಲ್ಲಿ ಶ್ರೀ ಮಠದ ಮೂಲ ಪುರುಷರು , ಶ್ರೀ ಮಧ್ವರ ಕರಕಮಲ ಸಂಜಾತರದ ಶ್ರೀ ಪದ್ಮನಾಭ ತೀರ್ಥರ ಮೂಲ ವೃಂದಾವನಕ್ಕೆ ಪೂಜೆ ಸಲ್ಲಿಸಿದರು. ಈ ಸಮಯದಲ್ಲಿ ಸಂಸ್ಥಾನದ ಎಲ್ಲ ವಿದ್ವನ್ಮಣಿಗಳು ಹಾಜರಿದ್ದರು. ಇದೆ ಸಂದರ್ಭದಲ್ಲಿ ಶ್ರೀ ಚತುರ್ಮುಖ ಬ್ರಹ್ಮ ಕರರ್ಚಿತ ಶ್ರೀಮನ್ಮೂಲ ರಾಮ ದೇವರ ಹಾಗು ದಿಗ್ವಿಜಯ-ಜಯರಾಮಾದಿ ಸಂಸ್ಥಾನ ಪ್ರತಿಮೆಗಳನ್ನೂ ಕ್ಷೇತ್ರದಲ್ಲಿ ಶ್ರೀಗಳವರು ಅರ್ಚಿಸಿದರು. ಶ್ರೀ ಮಠದಲ್ಲಿ ಸೇವೆ ಸಲ್ಲಿಸಿದ ವಿದ್ವನ್ಮಣಿಗಳಿಗೆ ಶ್ರೀಗಳಿಂದ ಸಮ್ಮಾನ ಮಾಡಲಾಯಿತು.




























No comments:

Post a Comment

"ಮಧ್ವೋಪದಿಷ್ಟ ಮೂಲರಾಮ ಪ್ರತಿಮಾ ಪ್ರಭಾವ" - ಶ್ರೀರಾಘವೇಂದ್ರವಿಜಯದ ದಾಖಲೆ

ಶ್ರೀರಾಘವೇಂದ್ರಸ್ವಾಮಿಗಳವರ ಮಂಗಲಕರ ಚರಿತ್ರೆಯನ್ನು ತಿಳಿಸುವ ಮಹತ್ಕೃತಿಯಾದ ಶ್ರೀರಾಘವೇಂದ್ರವಿಜಯವು ಸ್ವತಃ ಶ್ರೀರಾಘವೇಂದ್ರಸ್ವಾಮಿಗಳವರೇ ಅವಲೋಕಿಸಿ ಅನುಮೋದಿಸಿದ ಮಹತ್ಕ...